ಬೆಳಗಾವಿಯ ಪೋಲಿಸ್ ಕಮಿಷನರ್ ಯಡಾ ಮಾರ್ಟಿನ್ ಹಾಗೂ ಡಿಸಿಪಿ ರೋಹನ್ ಜಗದೀಶ್ ಅವರ ನೇತೃತ್ವದಲ್ಲಿ ಇಂದು ಬೆಳಗ್ಗೆ ಐದು ಗಂಟೆ ಸುಮಾರಿಗೆ ದಾಳಿ ಮಾಡಿ ಹಲವು ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ನಲವತ್ತು ಅಧಿಕಾರಿಗಳು ಹಾಗೂ 220 ಪೋಲಿಸ್ ಸಿಬ್ಬಂದಿಗಳು ಈ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದರು. ಈ ವೇಳೆಯಲ್ಲಿ ಹಿಂಡಲಗಾ ಜೈಲಿನಲ್ಲಿ ಮೂರು ಚಾಕು, 10 ತಂಬಾಕು ಚೀಟಿ, ಒಂದು ಸಿಗರೇಟ್, ಸ್ಮಾಲ್ ಹಿಟರ್ ವೈರ್ ಬಂಡಲ್ ಅನ್ನು ವಶಪಡಿಸಿಕೊಂಡು ಕೇಸು ದಾಖಲಿಸಲಾಗಿದೆ.