ಬೆಳಗಾವಿ, : ಗೋಕಾಕ ಮತ್ತು ಪಾಶ್ಚಾಪುರ ರಸ್ತೆಯಲ್ಲಿ ಬುಧವಾರ ಬೆಳಗ್ಗೆ ಶಾಲೆಗೆ ವಿದ್ಯಾರ್ಥಿಗಳನ್ನು ಸಾಗಿಸುತ್ತಿದ್ದ ಶಾಲಾ ಬಸ್ ಉರುಳಿದ ಪರಿಣಾಮ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಈ ಅಪಘಾತದಲ್ಲಿ ಐದು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, ಇತರ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳನ್ನು ಪಡೆದಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮರಡಿಮಠ ಗ್ರಾಮದ ಜೈ ಹನುಮಾನ ಸಂಜೀವ ನಾಯಕ ಆಂಗ್ಲ ಮಾಧ್ಯಮ ಶಾಲೆಗೆ ಮಾವನೂರ, ಗೊಡಚಿನಮಲ್ಕಿ, ಮೇಲಮಟ್ಟಿ ಭಾಗದ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಪ್ರಾಥಮಿಕ ವರದಿಯ ಪ್ರಕಾರ, ಬಸ್ಸಿನ ಸ್ಟೇರಿಂಗ್ ಬಂದ್ ಆದ ಕಾರಣ ಬಸ್ ಉರುಳಿ ಬಿದ್ದಿರುವುದಾಗಿ ತಿಳಿದುಬಂದಿದೆ.
ಸ್ಥಳೀಯ ಪೊಲೀಸರು ಘಟನೆಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಾಥಮಿಕ ವರದಿ ಮುಗಿದ ನಂತರ ಹೆಚ್ಚಿನ ಮಾಹಿತಿಯನ್ನು ಬಯಲಾಗಲಿದೆ.
Facebook
Twitter
WhatsApp