Prachanda Vani Kannada News

ಪ್ರಚಂಡವಾಣಿ

ಬ್ರೇಕಿಂಗ್ ನ್ಯೂಸ್

Rahul Gandhi ಯಾರು, ಪ್ರಧಾನಿ ಅಭ್ಯರ್ಥಿಯೇ?: ತೇಜಸ್ವಿ ಸೂರ್ಯ

Rahul Gandhi and Tejasvi Surya

 

ಬೆಂಗಳೂರು: ಪ್ರಮುಖ ಚುನಾವಣಾ ವಿಷಯಗಳ ಕುರಿತು ಚರ್ಚೆಯಲ್ಲಿ ಭಾಗವಹಿಸುವಂತೆ ನಿವೃತ್ತ ನ್ಯಾಯಧೀಶರ ಆಹ್ವಾನಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಯವರ ಪ್ರಸ್ತಾಪಕ್ಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೀಗೆ ಪ್ರತಿಕ್ರಿಯಿಸಿದ್ದಾರೆ.

“ರಾಹುಲ್ ಗಾಂಧಿಯವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವಂತೆ, ಪ್ರಧಾನಿ ಮೋದಿ ಅವರನ್ನು ಚರ್ಚೆಗೆ ಆಹ್ವಾನಿಸಲು ಹೇಳುತ್ತಾರೆ. ಈ ವಿಚಾರವಾಗಿ ಇಂಡಿಯಾ ಮೈತ್ರಿ ಕೂಟವು ಮೊದಲು ಕಾಂಗ್ರೆಸ್‌ನ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸಬೇಕು ಮತ್ತು ಸೋಲಿನ ಜವಾಬ್ದಾರಿಯನ್ನು ತಾವೇ ತೆಗೆದುಕೊಳ್ಳಬೇಕೆಂದು ಸೂಚಿಸಿದ್ದಾರೆ.”

“ತೇಜಸ್ವಿ ಸೂರ್ಯ ಅವರು ಕಾಂಗ್ರೆಸ್(Congress) ಮತ್ತು ಇಂಡಿಯಾ ಮೈತ್ರಿಕೂಟದಲ್ಲಿ ಗಾಂಧಿ ಕುಟುಂಬದ ಸ್ಥಾನವನ್ನು ಪ್ರಶ್ನಿಸಿದ್ದಾರೆ. ಅವರು ಪ್ರಧಾನಿ ಮೋದಿಯೊಂದಿಗೆ ಚರ್ಚೆ ಮಾಡುವ ಮೊದಲು ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಹೇಳಿದ್ದಾರೆ.”

ರಾಹುಲ್‌ ಗಾಂಧಿ(Rahul Gandhi) ಹೇಳಿದ್ದೇನು?:

ನಿವೃತ್ತ ನ್ಯಾಯಧೀಶರಾದ ಮದನ್‌ ಬಿ.ಲೋಕೂರ್ ಮತ್ತು ಅಜಿತ್ ಪ.ಶಾ ರಾಹುಲ್ ಗಾಂಧಿ(Rahul Gandhi) ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಾರದ ಹಿಂದೆ ಪತ್ರ ಬರೆದು ಚುನಾವಣಾ ವಿಷಯಗಳಲ್ಲಿ ಚರ್ಚೆಯಲ್ಲಿ ಭಾಗಹಿಸುವಂತೆ ಆಹ್ವಾನ ನೀಡಿದ್ದಾರೆ.

ರಾಹುಲ್ ಗಾಂಧಿ ನಿವೃತ್ತ ನ್ಯಾಯಾಧೀಶರಿಗೆ ಬರೆದ ಪತ್ರವನ್ನು ಸ್ವೀಕರಿಸಿ ಸಾರ್ವಜನಿಕ ಚರ್ಚೆಯಲ್ಲಿ ಭಾಗವಹಿಸಲು ಸಿದ್ಧವಾಗಿದ್ದುದರ ಬಗ್ಗೆ ನಿವೃತ್ತ ನ್ಯಾಯಾಧೀಶರು ತಿಳಿಸಿದ್ದರು.

ನಿವೃತ್ತ ನ್ಯಾಯಾಧೀಶರಾದ ಮದನ್‌ ಬಿ.ಲೋಕೂರ್ ಮತ್ತು ಅಜಿತ್ ಪ.ಶಾ ಮತ್ತಿತ್ತರರು ರಾಹುಲ್ ಗಾಂಧಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚರ್ಚೆಯಲ್ಲಿ ಭಾಗವಹಿಸಲು ಆಹ್ವಾನ ನೀಡಿದ್ದು, ಇದಕ್ಕೆ ಪ್ರತಿಕ್ರಿಯಿಸಿದ್ದು ರಾಹುಲ್ ಗಾಂಧಿ ಅವರಿಂದ ‘ನಾವು ಸಿದ್ದವಾಗಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರು ಚರ್ಚೆಯಲ್ಲಿ ಭಾಗವಹಿಸಬೇಕೆಂದು ದೇಶದ ಜನತೆ ನಿರೀಕ್ಷಿಸುತ್ತಾರೆ’ ಎಂದು ಹೇಳಿದ್ದಾರೆ. ‘ಪ್ರಮುಖ ರಾಜಕೀಯ ಪಕ್ಷದ ನಾಯಕರು ತಮ್ಮ ದೃಷ್ಟಿಕೋನವನ್ನು ಸಾಮಾನ್ಯ ವೇದಿಕೆಯಲ್ಲಿ ಪ್ರಸ್ತುತಪಡಿಸಲು ಇದು ಸಕಾರಾತ್ಮಕ ಕ್ರಮವಾಗಿದೆ. ಕಾಂಗ್ರೆಸ್ ಆಹ್ವಾನವನ್ನು ಸ್ವೀಕರಿಸಿದ್ದು, ಚರ್ಚೆಯಲ್ಲಿ ಭಾಗವಹಿಸಲು ಸಿದ್ದವಾಗಿದೆ’ ಎಂದಿದ್ದಾರೆ.

Leave a Comment

Your email address will not be published. Required fields are marked *

Scroll to Top