ಬೆಂಗಳೂರು: ಕಾನೂನಿನ ಪ್ರಕಾರ ಹೆಚ್.ಡಿ. ರೇವಣ್ಣ ಅವರ ಬಂಧನವಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್(Dr G Parameshwar) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿನ ಪ್ರಕಾರ ಹೆಚ್.ಡಿ. ರೇವಣ್ಣ ಅವರನ್ನು ಬಂಧಿಸಲಾಗಿದೆ. ಎಸ್ ಐಟಿ ಅಧಿಕಾರಿಗಳು ಎಲ್ಲವನ್ನು ಪರಿಶೀಲಿಸಿ ತನಿಖೆ ಮಾಡಲಿದೆ.
ವಿಚಾರಣೆ ಬಳಿಕ ರೇವಣ್ಣ ಅವರನ್ನು ಕೋರ್ಟ್ ಗೆ ಎಸ್ ಐಟಿ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ. ಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ಎಸ್ ಐಟಿ ಅಧಿಕಾರಿಗಳು ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದ್ದಾರೆ. ಎಸ್ ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆಂದು ಪತ್ತೆ ಹಚ್ಚಿ ಬಂಧಿಸಲಿದೆ. ಕಾನೂನಿನ ಚೌಕಟ್ಟಿನಲ್ಲೇ ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.