Prachanda Vani Kannada News

ಪ್ರಚಂಡವಾಣಿ

ಬ್ರೇಕಿಂಗ್ ನ್ಯೂಸ್

Modi 3.O : ಮೋದಿ ಸಂಪುಟದಲ್ಲಿ ಕರ್ನಾಟಕದ ಐವರಿಗೆ ಸ್ಥಾನ

Modi 3.0 modi

 ಹೊಸದಿಲ್ಲಿ: ಸತತ ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಇಂದು ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭದಲ್ಲಿ ಮೋದಿಯೊಂದಿಗೆ ಹಲವು ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಕರ್ನಾಟಕದಿಂದ ಯಾರೆಲ್ಲಾ ಕೇಂದ್ರ ಸಚಿವರಾಗಲಿದ್ದಾರೆ ಎಂಬ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ. ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ನ ಎಚ್ ಡಿ ಕುಮಾರಸ್ವಾಮಿ ಅವರಿಗೂ ಈ ಬಾರಿ ಕೇಂದ್ರ ಸಚಿವ ಸ್ಥಾನ ಗ್ಯಾರಂಟಿ ಆಗಿದ್ದು, ಇದಕ್ಕೆ ಅಧಿಕೃತ ಸಮ್ಮತಿ ಲಭಿಸಿದೆ.

ಮೋದಿ ಸಂಪುಟದಲ್ಲಿ ಕರ್ನಾಟಕದಿಂದ ಐವರು ಸಚಿವರಾಗಲಿದ್ದಾರೆ. ರಾಜ್ಯಸಭಾ ಸದಸ್ಯೆ ನಿರ್ಮಲಾ ಸೀತಾರಾಮನ್, ಹುಬ್ಬಳ್ಳಿ-ಧಾರವಾಡ ಸಂಸದ ಪ್ರಹ್ಲಾದ ಜೋಶಿ, ಬೆಂಗಳೂರು ಉತ್ತರ ಸಂಸದೆ ಶೋಭಾ ಕರಂದ್ಲಾಜೆ, ತುಮಕೂರು ಸಂಸದ ವಿ.ಸೋಮಣ್ಣ ಮತ್ತು ಮಂಡ್ಯ ಜೆಡಿಎಸ್ ಸಂಸದ ಎಚ್ ಡಿ ಕುಮಾರಸ್ವಾಮಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರಲ್ಲಿ ಮೂವರು ಈ ಹಿಂದೆ ಸಚಿವರಾಗಿದ್ದು, ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವರಾಗಿದ್ದರು, ಶೋಭಾ ಕರಂದ್ಲಾಜೆ ಆಹಾರ ಸಂಸ್ಕರಣಾ ಕೈಗಾರಿಕೆಗಳ ರಾಜ್ಯ ಸಚಿವೆಯಾಗಿದ್ದರು ಮತ್ತು ಪ್ರಹ್ಲಾದ ಜೋಶಿ ಸಂಸದೀಯ ವ್ಯವಹಾರಗಳ ಖಾತೆ ಸಚಿವರಾಗಿದ್ದರು.

ಈ ಬಾರಿಗೆ ಲಿಂಗಾಯತ ನಾಯಕ ವಿ.ಸೋಮಣ್ಣ ಅವರು ಮೋದಿ ಸಂಪುಟದಲ್ಲಿ ಅಚ್ಚರಿಯ ಪ್ರವೇಶ ಪಡೆದಿದ್ದಾರೆ.ಬಸವರಾಜ ಬೊಮ್ಮಾಯಿ ಅಥವಾ ಜಗದೀಶ್ ಶೆಟ್ಟರ್ ಅವರಿಗೆ ಮೋದಿ ಸಂಪುಟದಲ್ಲಿ ಅವಕಾಶ ಸಿಗಬಹುದು ಎನ್ನಲಾಗಿತ್ತು. ದೆಹಲಿಯಲ್ಲಿ ಸೋಮಣ್ಣ ಅವರು, “ನನಗೆ ಈ ಅವಕಾಶ ಸಿಕ್ಕಿದೆ. ನಾನು ಪ್ರಧಾನಿ, ಅಮಿತ್ ಶಾ, ಜೆಪಿ ನಡ್ಡಾ ಮತ್ತು ಪಕ್ಷದ ನಾಯಕರಿಗೆ ಧನ್ಯವಾದ ಹೇಳುತ್ತೇನೆ. ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಎಚ್‌ಡಿ ಕುಮಾರಸ್ವಾಮಿ ಮತ್ತು ನಾನು, ಹೀಗೆ ಇಂದು ಕರ್ನಾಟಕದ 5 ಜನರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

Leave a Comment

Your email address will not be published. Required fields are marked *

Scroll to Top