ನವದೆಹಲಿ/ಬೆಂಗಳೂರು, (ಮೇ 02): ಲೈಂಗಿಕ ದೌರ್ಜನ್ಯ, ಕಿರುಕುಳ ಪ್ರಕರಣ ದಾಖಲಾಗುತ್ತಿದ್ದಂತೆಯೇ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಜರ್ಮನಿಗೆ ತೆರಳಿದ್ದು, ಇದು ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಪ್ರಜ್ವಲ್ ಅವರನ್ನ ವಿದೇಶಕ್ಕೆ ಹೋಗುವಂತೆ ಹೇಳಿದ್ಯಾರು? ವೀಸಾ ಇಲ್ಲದೇ ದಿಢೀರ್ ವಿದೇಶಕ್ಕೆ ಹೋಗಿದ್ದೇಗೆ? ಹೀಗೆ ಪ್ರಜ್ವಲ್ ವಿದೇಶಕ್ಕೆ ಹಾರಿರುವ ಹಿಂದಿನ ಬಗ್ಗೆ ಹಲವು ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ಕಾಂಗ್ರೆಸ್, ದೇವೇಗೌಡ ಮತ್ತು ಕೇಂದ್ರ ಸರ್ಕಾರದ ಮೇ ಆರೋಪ ಮಾಡಿದೆ. ಇದರ ಬೆನ್ನಲ್ಲೇ ವಿದೇಶಾಂಗ ಸಚಿವಾಲಯವು ಸ್ಪಷ್ಟನೆ ನೀಡಿದ್ದು, ವಿದೇಶಕ್ಕೆ ತೆರಳಲು ಸಚಿವಾಲಯದಿಂದ ಯಾವುದೇ ಅನುಮತಿ ಕೇಳಿರಲಿಲ್ಲ. ವಿದೇಶಾಂಗ ಇಲಾಖೆಯಿಂದ ಯಾವುದೇ ವೀಸಾ ನೋಟ್ ಕೂಡ ನೀಡಿಲ್ಲ. ಬದಲಾಗಿ, ಅವರು ರಾಜತಾಂತ್ರಿಕ ಪಾಸ್‌ಪೋರ್ಟ್(diplomatic passport) ಮೂಲಕ ವಿದೇಶಕ್ಕೆ ಹೋಗಿದ್ದಾರೆ ಎಂದು ಸ್ಪಷ್ಟನೆ ನೀಡಿದೆ.
ಪ್ರಕರಣ ದಾಖಲಾಗುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿರುವ ಬಗ್ಗೆ ಸಾಕಷ್ಟು ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ. ದೆಹಲಿಯಿಂದ ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್ ಜೈಸ್ವಾಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಲು ನಾವು ಕೂಡ ಅನುಮತಿ ನೀಡಿಲ್ಲ ಎಂದು ಮುಂದುವರಿದರು. ವಿದೇಶಾಂಗ ಇಲಾಖೆಯಿಂದ ಯಾವುದೇ ವೀಸಾ ನೋಟ್ ಸಹ ಕೊಟ್ಟಿಲ್ಲ ಅಂತಹ ಸೂಚನೆಯೂ ಇಲ್ಲ. ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಪ್ರಯಾಣಿಸಿದ್ದಾರೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಇದರಿಂದ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ (Diplomatic Passport) ಮೂಲಕ ಜರ್ಮನಿಗೆ ಹಾರಿರುವುದು ಖಚಿತವಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜತಾಂತ್ರಿಕ ಪಾಸ್‌ಪೋರ್ಟ್‌ನ ರದ್ದುಗೊಳಿಸಲು ಪತ್ರ ಬರೆಯುವ ಸಲುವಾಗಿ ಮನವಿ ಮಾಡಿದ್ದಾರೆ.
Follow On WhatsApp Channel : Prachanda Vani Kannada News