ಪ್ರಜ್ವಲ್ ಮಾಜಿ ಪ್ರಧಾನಿಯೊಬ್ಬರ ಮೊಮ್ಮಗನಾಗಿರುವುದರಿಂದ ಪ್ರಕರಣ ಹೆಚ್ಚು ಸಂವೇದನಾಶೀಲವಾಗಿದೆ ಎಂದು ಜೋಶಿ ಹೇಳಿದರು.
Hubballi: ನಗರದಲ್ಲಿಂದಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೇಂದ್ರ ಸಚಿವ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ (Pralhad Joshi) ಜೋಶಿ ನಾಳೆ ಅಮಿತ್ ಶಾ(Amit Shah) ನಗರಕ್ಕೆ ಬಂದು ತಮ್ಮ ಪರ ಪ್ರಚಾರ ಮಾಡಲಿದ್ದಾರೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರ(PM Narendra Modi) ನಂತರ ಶಾ ಭಾರತದ ಅತ್ಯಂತ ಜನಪ್ರಿಯ ನಾಯಕರು ಮತ್ತು ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸಿದ್ದಾರೆ ಎಂದು ಹೇಳಿದ ಜೋಶಿ ಅವರ ಆಗಮನಕ್ಕಾಗಿ ಕ್ಷೇತ್ರದ ಕಾರ್ಯಕರ್ತರು ಮತ್ತು ಜನ ಕಾತುರದಿಂದ ಕಾಯುತ್ತಿದ್ದಾರೆ ಎಂದರು.
ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿ ಅವರು, ಪ್ರಜ್ವಲ್ ರೇವಣ್ಣ ವೈಯಕ್ತಿಕವಾಗಿ ತಪ್ಪು ಮಾಡಿದ್ದರೆ ಅದಕ್ಕೆ ಸರ್ಕಾರ, ಕಾನೂನು ಕ್ರಮ ಕೈಗೊಳ್ಳಲಿ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಪ್ರಜ್ವಲ್ ರೇವಣ್ಣನ ಪ್ರಕರಣ ಬಿಜೆಪಿ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರಲ್ಲ, ಜೆಡಿಎಸ್ ಒಂದು ಸ್ವತಂತ್ರ ಪಾರ್ಟಿ, ಪ್ರಜ್ವಲ್ ಮಾಜಿ ಪ್ರಧಾನಿಯೊಬ್ಬರ ಮೊಮ್ಮಗನಾಗಿರುವುದರಿಂದ ಪ್ರಕರಣ ಹೆಚ್ಚು ಸಂವೇದನಾಶೀಲವಾಗಿದೆ ಎಂದು ಜೋಶಿ ಹೇಳಿದರು. ಪ್ರಕರಣದ ತನಿಖೆ ನಡೆಯುತ್ತಿದೆ, ತಪ್ಪಿತಸ್ಥರಿಗೆ ಶಿಕ್ಷೆ ಅಗೇ ಆಗುತ್ತದೆ, ಖುದ್ದು ಕುಮಾರಾಸ್ವಾಮಿಯವರೇ, ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಅಂತ ಹೇಳಿದ್ದಾರೆ. ಪ್ರಜ್ವಲ್ ವಿದೇಶಕ್ಕೆ ಹಾರಿ ಹೋಗಿದ್ದಕ್ಕೆ ಕಾಂಗ್ರೆಸ್ ನಾಯಕರು ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೇಳಿದರು.
ವೈಯಕ್ತಿಕವಾಗಿ ಯಾರೇ ತಪ್ಪು ಮಾಡಿದರೂ ಅವರ ಮೇಲೆ ಕ್ರಮವಾಗಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಇದೆ. ಕಾನೂನು ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡಲಿ ಎಂದು ಹೇಳಿದರು.
[DISPLAY_ULTIMATE_SOCIAL_ICONS]