ಶಿವಮೊಗ್ಗದಲ್ಲಿ ಬಸ್ ನಿಲ್ದಾಣದ ಬಳಿಯ ಖಾಸಗಿ ಮೊಬೈಲ್ ಅಂಗಡಿಯಲ್ಲಿ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ನಡೆದಿದೆ. ಸೋಮವಾರ ರಾತ್ರಿ 11 ಗಂಟೆಗೆ ಸುಮಾರಿಗೆ ಬೆಂಕಿ ಹರಿದಿದ್ದು,
ಅಂಗಡಿಯಲ್ಲಿದ್ದ ಸಾಮಾನುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ, ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿಯನ್ನು ನಿಗ್ರಹಿಸಿತು. ಶಾಸಕ ಎಸ್. ಎನ್. ಚನ್ನಬಸಪ್ಪ ಅವರು ಭೇಟಿ ನೀಡಿ ಪರಿಶೀಲಿಸಿದರು.